ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 7ನೇ ವಾರ್ಷಿಕ ಸಮಾರಂಭವು ಎ.19 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಾಂಸ್ಕೃತಿಕ ವೇದಿಕೆಯಲ್ಲಿ ಜರಗಲಿದ್ದು, ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಾಗೂ ಸಂಜೆ ಹೊಟೇಲ್ ಅಶ್ವಿನಿ ಸಭಾಂಗಣದಲ್ಲಿ ನೆರವೇರಿತು.
ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಸಂಜೆ ಅಶ್ವಿನಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಏಳನೇ ವಾರ್ಷಿಕ ಸಮಾರಂಭದ ಉದ್ಘಾಟಕರಾದ ಅಕ್ಷಯ ಕಾಲೇಜು ಚೇರ್ ಮ್ಯಾನ್ ಜಯಂತ್ ನಡುಬೈಲುರವರು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಿ.ಪಕ್ಕಳ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಅಧ್ಯಕ್ಷ ಕರುಣಾಕರ್ ರೈ ದೇರ್ಲ, ನಿಕಟಪೂರ್ವ ಅಧ್ಯಕ್ಷ ನೋಣಾಲು ಜೈರಾಜ್ ಭಂಡಾರಿ, ಉಪಾಧ್ಯಕ್ಷ ನುಳಿಯಾಲು ರವೀಂದ್ರ ಶೆಟ್ಟಿ, ಹರಿಣಾಕ್ಷಿ ಜೆ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ರೈ ಬಿ, ಕೋಶಾಧಿಕಾರಿ ಪ್ರೊ.ದತ್ತಾತ್ರೇಯ ರಾವ್, ಗೌರವ ಸಲಹೆಗಾರ ಎ.ಜಗಜ್ಜೀವನದಾಸ್ ರೈ, ಹಿರಿಯರಾದ ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಸದಸ್ಯರಾದ ಎಂ.ಗಂಗಾಧರ್ ರೈ, ಎಂ.ಆರ್ ಜಯಕುಮಾರ್ ರೈ ಮಿತ್ರಂಪಾಡಿ, ಎಂ.ಸಂಕಪ್ಪ ರೈ, ಗಣೇಶ್ ರೈ ಡಿಂಬ್ರಿ, ರವೀಂದ್ರನಾಥ್ ರೈ ಕೆ.ಎಸ್ ಬಳ್ಳಮಜಲುಗುತ್ತು, ಡಾ.ಎನ್ ಉದಯಕುಮಾರ್ ಕೊಳತ್ತಾಯ, ಸುದರ್ಶನ್ ರಾವ್, ಬಾಲಕೃಷ್ಣ ರೈ ಆನಾಜೆ, ಪ್ರೊ.ಸುಬ್ಬಪ್ಪ ಕೈಕಂಬ, ನಾರಾಯಣ ರೈ ಕುಕ್ಕುವಳ್ಳಿ, ಕುಮಾರಿ ಸಿ ರೈ, ಸಂತೋಷ್ ರೈ ಕುಂಬ್ರ ಮೇಗಿನಗುತ್ತು, ಸಂದೀಪ್ ರೈ ಚಿಲ್ಮೆತ್ತಾರು, ಧ್ವಾನ ರೈ, ಸುಜಿತ್ ಕುಮಾರ್ ಶೆಟ್ಟಿ ನುಳಿಯಾಲು, ಸಹಿತ ಹಲವರು ಉಪಸ್ಥಿತರಿದ್ದರು.
ರಾತ್ರಿ ಪಟ್ಲ ಸತೀಶ್ ಶೆಟ್ಟಿ ರವರ ನೇತೃತ್ವದಲ್ಲಿ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಜನಪ್ರಿಯ ಪ್ರಸಂಗ “ತ್ರಿಜನ್ಮ ಮೋಕ್ಷ” ಪೌರಾಣಿಕ ಪುಣ್ಯ ಕಥಾನಕ ಪ್ರದರ್ಶನಗೊಳ್ಳಲಿದೆ.