ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಎ.9ರಂದು ಮಹಿಳಾ ಮೋರ್ಚಾದ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಸಿದ್ಧತಾ ಸಭೆಯು ಎ.3ರಂದು ಬಿಜೆಪಿ ಚುನಾಣಾ ನಿರ್ವಾಹಣಾ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್ ಅವರು ಮಹಿಳಾ ಸಮಾವೇಶದ ಕುರಿತು ಮಾಹಿತಿ ನೀಡಿದರು. ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಾಹಣ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ ಸಹಿತಿ ಹಲವಾರು ಮಂದಿ ಉಪಸ್ಥಿತರಿದ್ದರು.