ಪುತ್ತೂರು: ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ವತಿಯಿಂದ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿರುವ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ ಏ.23 ಹಾಗೂ 24 ರಂದು ನಡೆಯಲಿದ್ದು, ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಎ.6ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರದಲ್ಲಿ ಬಿಡುಗಡೆ ಮಾಡಲಾಯಿತು.
ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯರು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು.
ಮಂದಿರದ ಟ್ರಸ್ಟ್ ಸಮಿತಿ ಮತ್ತು ನವೀಕರಣ ಸಮಿತಿಯಿಂದ ಆಮಂತ್ರಣ ಪತ್ರವನ್ನು ಬಿಳಿಕ ಬಿಡುಗಡೆಗೊಳಿಸಲಾಯಿತು. ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕೆಮ್ಮಿಂಜೆ, ಕಾರ್ಯದರ್ಶಿ ಅರುಣ್ ಕುಮಾರ್ ಆಲಂಕಾರ್, ಕೋಶಧಿಕಾರಿ ವಿಜಯಲಕ್ಷ್ಮೀ ಅತ್ತಾಳ, ನವೀಕರಣ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಪುನರ್ವಸು, ಕಾರ್ಯಾಧ್ಯಕ್ಷ ನಿತಿನ್ ಕುಮಾರ್ ಮಂಗಳ, ಕಾರ್ಯದರ್ಶಿ ಬಾಲಚಂದ್ರ ಮೊಟ್ಟೆತ್ತಡ್ಕ, ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಕೆಮ್ಮಿಂಜೆ, ಶ್ರೀ ಭಜನಾ ಮಂದಿರ ಟ್ರಸ್ಟ್ ಸದಸ್ಯರಾದ ಕಿರಣ್ ಕುಮಾರ್, ಜಯಮಾಲಾ, ಶಶಿ ಅತ್ತಾಳ, ಚಂದ್ರಹಾಸ ಕೆಮ್ಮಿಂಜೆ, ಯುವ ಸಂಘದ ಅಧ್ಯಕ್ಷ ಅನೀಶ್ ಕುಮಾರ್ ಮರೀಲ್, ಸುಬ್ರಹ್ಮಣ್ಯ ಕೆಮ್ಮಿಂಜೆ, ಮಹಿಳಾ ವೃಂದದ ಅಧ್ಯಕ್ಷೆ ರೇಣುಕಾ ನವೀನ್, ಸುದರ್ಶನ್ ನಾಕ್ ಕಂಪ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಮಠಾಧೀಶರಿಗೆ ಆಮಂತ್ರಣ
60 ವರ್ಷ ಪೂರ್ವದ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಒಳ ಭಾಗದ ನವೀಕರಣದ ಅಂಗವಾಗಿ ಏ 23 ಮತ್ತು 24 ರಂದು ನಡೆಯುವ ಪುನರ್ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷ ಚಂದ್ರಶೇಖರ ರಾವ್, ನವೀಕರಣ ಸಮಿತಿ ಅಧ್ಯಕ್ಷ ನವೀನ್ ಚಂದ್ರ, ನಿತಿನ್ ಕುಮಾರ್, ಕಿರಣ್ ಕುಮಾರ್, ಸುರೇಶ್ ಕುಮಾರ್ ಕೆಮ್ಮಿಂಜೆ ಮುಂತಾದವರು ಉಪಸ್ಥಿತರಿದ್ದರು.