ಪುತ್ತೂರು: ಮೂಲ ಸೌಕರ್ಯವಾದ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಚಿಕ್ಕಮುಡ್ನೂರು ಗ್ರಾಮದ ಗ್ರಾಮಸ್ಥರು ಎಣಿಮುಗೇರು ಎಂಬಲ್ಲಿ ಎ.7ರ ರಾತ್ರಿ ಅಳವಡಿಸಿದ ಚುನಾವಣಾ ಬಹಿಷ್ಕಾರದ ಬ್ಯಾನರ್ ಅನ್ನು ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಮೂಲಸೌಕರ್ಯ ಒದಗಿಸುವ ಭರವಸೆ ನೀಡಿ ಬ್ಯಾನರ್ ತೆರವುಗೊಳಿಸಿದ್ದಾರೆ.
ರಸ್ತೆ, ನೀರು ಮತ್ತು ದಾರಿ ದೀಪದ ಅವ್ಯವಸ್ಥೆಯ ವಿರುದ್ಧ ಗ್ರಾಮಸ್ಥರು ಸಿಡಿದೆದ್ದು ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಸಿದ್ದರು. ವಿಷಯ ತಿಳಿದ ಚುನಾವಣಾ ಕರ್ತವ್ಯದಲ್ಲಿರುವ ಸೆಕ್ಟರ್ ಅಧಿಕಾರಿಗಳು, ಫ್ಲೈಯಿಂಗ್ ಸ್ವಾರ್ಡ್ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿಗಳು ಎ.8ರಂದು ಸ್ಥಳಕ್ಕೆ ತೆರಳಿ ಗ್ರಾಮಸ್ಥರಲ್ಲಿ ಸಮಸ್ಯೆಗಳ ಮಾಹಿತಿ ಪಡೆದು ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿ ಮನವೊಲಿಸಿ ಬ್ಯಾನರ್ ತೆರವು ಮಾಡಿದ್ದಾರೆ.