ಲೋಕಸಭಾ ಚುನಾವಣೆ – ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಕ್ಷೇತ್ರದ ಉಸ್ತುವಾರಿಯಾಗಿ ನೂರುದ್ದೀನ್ ಸಾಲ್ಮರ ನೇಮಕ

0

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ವಿಜಯಕ್ಕಾಗಿ ಕಾರ್ಯಪ್ರವೃತ್ತರಾಗಲು, ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಕ್ಷೇತ್ರದ ಉಸ್ತುವಾರಿಯಾಗಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರರವರನ್ನು, ದ.ಕ. ಜಿಲ್ಲಾ ಕಾಂಗ್ರೆಸ್ ನೇಮಕಗೊಳಿಸಿ ಆದೇಶಿಸಿದೆ.

ಪುತ್ತೂರಿನಲ್ಲಿ ನ್ಯಾಯವಾದಿ ಮತ್ತು ನೋಟರಿಯಾಗಿ ಸೇವೆ ಸಲ್ಲಿಸುತ್ತಿರುವ ನೂರುದ್ದೀನ್ ರವರು, ಕೆಪಿಸಿಸಿ ಸಂಯೋಜಕರಾಗಿದ್ದು, ಪಕ್ಷದ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಸೇವೆ ಸಲ್ಲಿಸಿ, ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ದುಡಿದಿದ್ದರು. ಇವರು ಈ ಹಿಂದೆ 2013ರ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಗ್ರಾಮಾಂತರ ಕ್ಷೇತ್ರದ ಹಾಗೂ ನಂತರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮರು ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಉಸ್ತುವಾರಿಯಾಗಿಯು ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here