ಪುತ್ತೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿಗೆ ಶೇ. 98 ಫಲಿತಾಂಶ ಲಭಿಸಿದೆ ಮಾತ್ರವಲ್ಲ ವಿಜ್ಞಾನ ವಿಭಾಗದಲ್ಲಿ 2 ಮತ್ತು ವಾಣಿಜ್ಯ ವಿಭಾಗದಲ್ಲಿ 1 ರ‍್ಯಾಂಕ್ ಗಳನ್ನು ತನ್ನದಾಗಿಸಿಕೊಂಡಿದೆ.
ಶೇಕಡ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಈ ಬಾರಿ ಕಾಲೇಜಿನ 34 ಮಂದಿ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪಿ. ಹಲೀಮತ್ ಶೈಮರವರು 591 ಅಂಕಗಳನ್ನು ಪಡೆದು ರಾಜ್ಯದಲ್ಲಿ 8ನೇ ರ‍್ಯಾಂಕ್ ಹಾಗೂ ಪ್ರವನ್ ಪೊನ್ನಪರವರು 589 ಅಂಕಗಳನ್ನು ಪಡೆದು ರಾಜ್ಯದಲ್ಲಿ 10ನೇ ರ‍್ಯಾಂಕ್ ಮತ್ತು ವಾಣಿಜ್ಯ ವಿಭಾಗದಲ್ಲಿ ಪ್ರತೀಕ್ಷಾ ಡಿ.ಎಸ್ 588 ಅಂಕಗಳನ್ನು ಪಡೆದು ರಾಜ್ಯದಲ್ಲಿ 10ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ಅಶ್ವಿನ್ ಎಂ.ಎಂ ರವರು 577 ಅಂಕಗಳನ್ನು ಗಳಿಸಿ ಪ್ರಥಮರೆನಿಸಿಕೊಂಡಿದ್ದಾರೆ.
ಒಟ್ಟು 609 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸರಾಸರಿ ಶೇಕಡ ಫಲಿತಾಂಶ 98 ಹೊಂದಿದ್ದು, ಇದರಲ್ಲಿ 190 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 366 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಕಲಾ ವಿಭಾಗದಲ್ಲಿ ಶೇ 100 , ವಾಣಿಜ್ಯ ವಿಭಾಗದಲ್ಲಿ ಶೇ 99 ಮತ್ತು ವಿಜ್ಞಾನ ವಿಭಾಗದಲ್ಲಿ ಶೇ 97 ಫಲಿತಾಂಶ ಬಂದಿರುತ್ತದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.