





ಪುತ್ತೂರು: ವ್ಯಾಗನರ್ ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುರದಲ್ಲಿ ಎ.10 ರಂದು ನಡೆದಿದೆ.



ಪುತ್ತೂರು ಕಡೆ ಬರುತ್ತಿದ್ದ ವ್ಯಾಗನರ್ ಕಾರು ಮತ್ತು ಕಬಕ ಕಡೆ ಹೋಗುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದವರಿಗೆ ತೀವ್ರ ಗಾಯವಾಗಿದ್ದು ಅವರನ್ನು ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.







 
            