ಪುತ್ತೂರು ಜಾತ್ರೆ – ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಎ.10ರಂದು ಧ್ವಜಾರೋಹಣ ಮೂಲಕ ಚಾಲನೆ ದೊರೆತಂತೆ ದೇವಳದ ಎದುರು ಗದ್ದೆಯಲ್ಲಿನ ಶ್ರೀ ಪಾರ್ವತಿ ಸಾಂಸ್ಕೃತಿಕ ವೇದಿಕೆಯಲ್ಲಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಎ.17ರ ಬ್ರಹ್ಮರಥೋತ್ಸವದ ಸಂದರ್ಭ ಬಿಟ್ಟು ಉಳಿದ ದಿನ ಎ.10 ರಿಂದ 20ರ ತನಕ ಪ್ರತಿ ದಿನ ಸಂಜೆಯಿಂದ ರಾತ್ರಿ ತನಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ಚಾಲನೆ ನೀಡಿದರು. ಈ ಸಂದರ್ಭ ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯಕ್ರಮದ ಉಸ್ತುವಾರಿ ಡಾ| ರಾಜೇಶ್ ಬೆಜ್ಜಂಗಳ, ನಿವೃತ್ತ ಮುಖ್ಯಗುರು ಸುರೇಶ್ ಶೆಟ್ಟಿ, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ಗೋಪಾಲಕೃಷ್ಣ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಸುದೇಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ, ನಳಿನಿ ಪಿ ಶೆಟ್ಟಿ, ಪಿ.ವಿ.ದಿನೇಶ್, ಸುಭಾಷ್ ರೈ ಬೆಳ್ಳಿಪ್ಪಾಡಿ, ನಯನಾ ರೈ, ಗಣೇಶ್ ಶೆಟ್ಟಿ ಕೆ, ಕೃಷ್ಣಪ್ರಸಾದ್ ಆಳ್ವ, ವೀಣಾ ಬಿ.ಕೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here