ಪುತ್ತೂರು: ಬೆಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.88 ಫಲಿತಾಂಶ ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ 41 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೂವರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ. 23 ವಿದ್ಯಾರ್ಥಿಗಳು ಪ್ರಥಮ ದರ್ಜೆ, 9 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದ ಮರೀನಾ ಮೊಂತೆರೊ 542 ಅಂಕ, ವಾಣಿಜ್ಯ ವಿಭಾಗದ ತನುಶ್ರೀ 532 ಅಂಕ, ವಿಜ್ಞಾನ ವಿಭಾಗದ ಪ್ರಿಯಾಂಕ ಎನ್.ರವರು 520 ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ.