ಪುತ್ತೂರು: ಲೋಕಸಭಾ ಚುನಾವಣೆ ಕರ್ತವ್ಯ ನಿರತ ಮನೆ ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆ ಎ.16 ರಂದು ಬೆಳಿಗ್ಗೆ ನಡೆದಿದೆ.
ಲೋಕಸಭಾ ಚುನಾವಣೆಯ ಸಂಬಂಧ ಮನೆಮನೆಗೆ ಮತ ಚೀಟಿ ವಿತರಣೆಗೆ ಚುನಾವಣಾಧಿಕಾರಿಯವರ ಸೂಚನೆಯಂತೆ ಅಂಗನವಾಡಿ ಕಾರ್ಯಕರ್ತೆಯರು ತೆರಳುವ ಕಾರ್ಯ ಎ.16 ರಿಂದ ಆರಂಭಗೊಂಡಿದ್ದು, ಈ ಸಂಬಂಧ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತ ಚೀಟಿ ವಿತರಣೆ ಮತದಾರರ ಮನೆಯೊಂದಕ್ಕೆ ಹೋಗುತ್ತಿದ್ದ ವೇಳೆ ಇನ್ನೊಂದು ಮನೆಯಿಂದ ಹೊರ ಬಂದ ಮಹಿಳೆ ಅಂಗನವಾಡಿ ಕಾರ್ಯಕರ್ತೆಯೊಂದಿಗೆ ಮಾತನಾಡುತ್ತಿದ್ದ ವೇಳೆ ಆಕೆಯ ಮಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಅಂಗನವಾಡಿ ಕಾರ್ಯಕರ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.