ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ಎ.16ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದ ಕಬಡ್ಡಿ ತರಬೇತುದಾರ ಹಾಗೂ ನಿವೃತ್ತ ಯುವಜನ ಸಂಯುಕ್ತ ಒಕ್ಕೂಟದ ಕ್ರೀಡಾಧಿಕಾರಿ ಮಾಧವ ಬಿ.ಕೆ ಎನ್‌ಐಎಸ್‌ ಮಾತನಾಡಿ, ಮಾನವನು ಆರೋಗ್ಯವಂತನಾಗಿರಲು ತನ್ನನ್ನು ತಾನು ಬೇರೆ ಬೇರೆ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿರಬೇಕಾದ ಅಗತ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವುದರೊಂದಿಗೆ, ಒಬ್ಬ ವ್ಯಕ್ತಿ ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಬೇಕಾದರೆ ಆತನು ನಿರಂತರ ತರಬೇತಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು ಎಂದರು.

ಸಂಸ್ಥೆಯ ಸಂಚಾಲಕ ಕೆ.ಸೀತಾರಾಮ ರೈ ಮಾತನಾಡಿ, ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಲು ಕ್ರೀಡೆಯ ಅಗತ್ಯತೆಯನ್ನು ತಿಳಿಯಪಡಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಕಾಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತೃತೀಯ ಬಿ.ಎ ವಿದ್ಯಾರ್ಥಿ ಶಮೀರ್ ಸ್ವಾಗತಿಸಿ, ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಪುಣ್ಯ ವಂದಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿ ಸಿ.ಜೆ ಮಹಮ್ಮದ್ ಸಾಧಿಕ್ ಕ್ರೀಡಾ ಪ್ರತಿಜ್ಞೆಯನ್ನು ವಾಚಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ಸ್ವಾತಿ ಅತಿಥಿಗಳ ಪರಿಚಯ ಮಾಡಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಅಲಿಮತ್ ಸಜಾನ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರಾವ್ಯವಾಣಿ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ, ಉಪಪ್ರಾಂಶುಪಾಲ ಶೇಷಗಿರಿ ಎಂ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here