ಕಾಂಗ್ರೆಸ್ ರಾಜ್ಯ ವಕ್ತಾರೆಯಾಗಿ ಶೈಲಜಾ ಅಮರನಾಥ್ ನೇಮಕ

0

ಪುತ್ತೂರು:ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಶೈಲಜಾ ಅಮರನಾಥ್ ಅವರನ್ನು ರಾಜ್ಯ ಕಾಂಗ್ರೆಸ್ ಮಾಧ್ಯಮ ಮತ್ತು ಸಂವಹನ ವಿಭಾಗಕ್ಕೆ ವಕ್ತಾರರಾಗಿ ನೇಮಿಸಲಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರ ನಿರ್ದೇಶನದ ಮೇರೆಗೆ ಮಾಧ್ಯಮ ಹಾಗೂ ಸಂವಹನದ ಅಧ್ಯಕ್ಷ ರಮೇಶ್ ಬಾಬು ಅವರು ಶೈಲಜಾ ಅಮರನಾಥ್ ಸೇರಿ 36 ಪದಾಧಿಕಾರಿಗಳನ್ನು ರಾಜ್ಯ ವಕ್ತಾರರಾಗಿ ನೇಮಿಸಿ ಜವಾಬ್ದಾರಿಯನ್ನು ನೀಡಿರುತ್ತಾರೆ.


ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನಿರ್ದೇಶನಕ್ಕೆ ಅನುಗುಣವಾಗಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಂಡು ಪ್ರಸಕ್ತ ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಗೆಲುವಿಗೆ ತೊಡಗಿಸಿಕೊಳ್ಳಲು ಮತ್ತು ಪ್ರದೇಶ ಕಾಂಗ್ರೆಸ್ ಪಕ್ಷದ ಇತರೆ ಘಟಕಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಪಕ್ಷದ ಸಂಘಟನೆಯೊಂದಿಗೆ ಕೆಲಸ ಮಾಡಲು ನೂತನ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here