ನಿಡ್ಪಳ್ಳಿ; ಇದೇ ತಿಂಗಳ 26 ರಂದು ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆ ಪ್ರಯುಕ್ತ ಬಿ.ಜೆ.ಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರ ಪಾಣಾಜೆ ಶಕ್ತಿ ಕೇಂದ್ರದ ವತಿಯಿಂದ ಮಹಾ ಸಂಪರ್ಕ ಅಭಿಯಾನ ಏ.21 ರಂದು ಪಾಣಾಜೆ ಗ್ರಾಮದಲ್ಲಿ ನಡೆಯಿತು.
ಚುನಾವಣಾ ಉಸ್ತುವಾರಿ ರವೀಂದ್ರ ಭಂಡಾರಿ ಬೈಂಕ್ರೊಡು ಹಾಗೂಮ್ ಡಾ.ಅಖಿಲೇಶ್ ಪಾಣಾಜೆ ಇವರ ನೇತೃತ್ವದಲ್ಲಿ ನಡೆದ ಮಹಾ ಸಂಪರ್ಕ ಅಭಿಯಾನದಲ್ಲಿ ಬೂತ್ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಪಾಣಾಜೆ ಸಿ.ಎ ಬ್ಯಾಂಕ್ ನಿರ್ದೇಶಕರು, ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರುಗಳು, ಪಾಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಹಾಗೂ ಸದಸ್ಯರು ಮತ್ತು ಹಲವಾರು ಹಿರಿಯ ಕಿರಿಯ ಕಾರ್ಯಕರ್ತರು ಈ ಮಹಾ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡರು.