ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜು 2024-25ನೇ ಶೈಕ್ಷಣಿಕ ವರ್ಷದಿಂದ ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳನ್ನು ಪರಿಚಯಿಸುತ್ತಿದೆ. ಪದವಿಪೂರ್ವ ಶಿಕ್ಷಣ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಈ ವಿನೂತನ ಪ್ರಯೋಗವನ್ನು ಸಂಸ್ಥೆ ಆರಂಭಿಸುತ್ತಿದ್ದು, ಈ ಕೋರ್ಸ್ಗಳ ಮೂಲಕ ವಿದ್ಯಾರ್ಥಿಗಳಿಗೆ ಶೇರು ವಹಿವಾಟು, ಟ್ಯಾಲಿ, ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮುಂತಾದ ವಿಷಯಗಳ ಬಗ್ಗೆ ವ್ಯಾವಹಾರಿಕ ಹಾಗೂ ಪ್ರಾಯೋಗಿಕ ಜ್ಞಾನ ನೀಡಲು ಸಂಸ್ಥೆ ಮುಂದಾಗಿದೆ.
ಈ ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳ ಉದ್ಘಾಟನಾ ಸಮಾರಂಭವು ಏ.24ರಂದು 10 ಗಂಟೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೇತಾಜಿ ಸಭಾಂಗಣದಲ್ಲಿ ಜರುಗಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ. ಪಿ.ಇವರು ವಹಿಸಲಿದ್ದು, ಖ್ಯಾತ ಉದ್ಯಮಿ, ಅಜೇಯ ವಿಶ್ವಸ್ಥ ಮಂಡಳಿ, ಮೂರ್ಕಜೆ, ವಿಟ್ಲ ಇದರ ಅಧ್ಯಕ್ಷ ಪಿ. ಸುಬ್ರಾಯ ಪೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೆಲ್ತ್ ವಿಷನ್ ಪುತ್ತೂರು ಹಾಗೂ ಹಾರ್ದಿಕ್ ಹರ್ಬಲ್ಸ್ ಬಂಟ್ವಾಳ ಇದರ ಸಂಸ್ಥಾಪಕ ಮುರಳೀಧರ ಕೆ. ಭಾಗವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಕೆ. ಎನ್. ಸುಬ್ರಹ್ಮಣ್ಯ ಹಾಗೂ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತಿಯಲ್ಲಿ
ಪೋಷಕರು, ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಮುಂಬರುವ ಶೈಕ್ಷಣಿಕ ವರ್ಷದಿಂದ ಈ ಕೋರ್ಸ್ಗಳು ಆರಂಭಗೊಳ್ಳಲಿದೆ.