ಮನೆಯಲ್ಲೇ ಮತದಾನ ಮುಗಿಸಿದ್ದ ಮಾಜಿ ಸೈನಿಕ ಆಸ್ಪತ್ರೆಯಲ್ಲಿ ನಿಧನ

0

ಮಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಪುತ್ತೂರು ಮೂಲದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬಂಟ್ವಾಳ ವಗ್ಗ ನಿವಾಸಿ, ಮಾಧವ ಪ್ರಭು (85 ವ) ಮೃತಪಟ್ಟವರು.

ಮಾಧವ ಪ್ರಭುರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುರವರು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಲಿ ಏ.15ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಬುಧವಾರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here