





ಉಪ್ಪಿನಂಗಡಿ: ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಉಪ್ಪುಂದ ಜಿ.ಪಂ. ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಗಳನ್ನಾಗಿ ಎಂ.ಎಸ್. ಮುಹಮ್ಮದ್, ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವರನ್ನು ನೇಮಕ ಮಾಡಲಾಗಿದೆ.


ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದಿದೆ. ಉಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ಈ ಸಂದರ್ಭ ಪಕ್ಷದ ಉಸ್ತುವಾರಿಗಳನ್ನು ನೇಮಿಸುತ್ತಿರುವ ಕೆಪಿಸಿಸಿಯು ಬೈಂದೂರು ಕ್ಷೇತ್ರದ ಉಪ್ಪುಂದ ಜಿಲ್ಲಾ ಪಂಚಾಯತ್ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ಕಾಂಗ್ರೆಸ್ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ ಅವರನ್ನು ನೇಮಕಗೊಳಿಸಿ ಆದೇಶಿಸಿದೆ.














