ಜನಸಾಮಾನ್ಯರು ಈ ಬಾರಿ ಕಾಂಗ್ರೆಸ್ ಪರ ಮತ ಚಲಾಯಿಸಿದ್ದು ಹೀಗಾಗಿ ದ.ಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು 60 ಸಾವಿರ ಮತಗಳ ಅಂತರದಿಂದ ಜಯಭೇರಿ ಬಾರಿಸಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಬಡವರಿಗೆ, ಮಧ್ಯಮ ವರ್ಗದವರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆ ಮೂಲಕ ರಾಜ್ಯದ ಜನತೆಗೆ ಬದುಕು ಕಟ್ಟಿಕೊಡುವ ಕೆಲಸ ಮಾಡಿದೆ, ಅಲ್ಲದೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದಲ್ಲಿ ಮಾಡುತ್ತಿರುವ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಾರ್ಯಗಳು ಜನರಿಗೆ ತೃಪ್ತಿ ನೀಡಿದೆ. ಹಾಗಾಗಿ ಜನ ಈ ಬಾರಿ ಕಾಂಗ್ರೆಸ್ ಪರ ತಮ್ಮ ಒಲವು ತೋರಿದ್ದು ಪದ್ಮರಾಜ್ ಆರ್ ಪೂಜಾರಿ ಗೆಲುವು ನಿಶ್ಚಿತ.