ಪುತ್ತೂರು: 2023-24ನೇ ಸಾಲಿನ ಎಸ್ಎಸ್ಏಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯು ಸತತವಾಗಿ 9ನೇ ಬಾರಿಗೆ ಶೇ.100 ಫಲಿತಾಂಶ ಪಡೆದುಕೊಳ್ಳುವ ಮೂಲಕ ಸರಕಾರಿ ಶಾಲೆಯೊಂದು ವಿಶಿಷ್ಠ ಸಾಧನೆ ಮಾಡಿದೆ.
ಶಾಲೆಯಿಂದ 31 ಹುಡುಗರು ಹಾಗೂ 23 ಹುಡುಗಿಯರು ಸೇರಿದಂತೆ ಒಟ್ಟು 54 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಶ್ರೇಯ 600 ಅಂಕಗಳೊಂದಿಗೆ ಶಾಲೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ್ದಾರೆ. ಮಧುರ(568)ಅಜಿತ್ ಸಿ.(567), ಅಖಿಲೇಶ್(565), ನಂದಿನಿ(564), ಅನುಷಾ(557), ತೇಕ್ಷಾ(557), ವನಶ್ರೀ ಸಿ.ಆರ್.(555), ಆಯಿಶತ್ ವಫಾ(553), ಸ್ಫೂರ್ತಿ(547), ಜೀವನ್(535) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಉಳಿದಂತೆ 41 ಮಂದಿ ಪ್ರಥಮ ಶ್ರೇಣಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಪರಿಣಿತ ಅಧ್ಯಾಪಕರ ನಿರಂತರ ಪರಿಶ್ರಮದಿಂದ ಸತತವಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಖಾಸಗಿ ಶಾಲೆಗಳನ್ನು ಮೀರಿಸುವಂತೆ ಬೆಳಿಗ್ಗೆ 8ರಿಂದ ಸಂಜೆ 6 ಗಂಟೆ ತನಕ ತರಗತಿ ನಡೆಸಲಾಗುತ್ತಿತ್ತು. ವಿದ್ಯಾರ್ಥಿಗಳಿಗೆ ಪ್ರತಿ ದಿನ ಉಪಹಾರ ನೀಡುವ ಮೂಲಕ ಪೋಷಕರು, ಎಸ್ಡಿಎಂಸಿ ಸದಸ್ಯರು ಸಹಕರಿಸಿದ್ದಾರೆ. ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಚಿನ್ನದ ನಾಣ್ಯ ನೀಡಲಾಗುತ್ತಿದೆ ಎಂದು ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.