ಎಸ್‌ಎಸ್‌ಎಲ್‌ಸಿ: ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ನೆಲ್ಯಾಡಿ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟಿರುವ ಬಜತ್ತೂರು ಗ್ರಾಮದ ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ಸಂಸ್ಥೆಯಿಂದ 19 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇಬ್ಬರು ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಶ್ರವಣ್ ಕೆ.ಎ. 601, ನೇಹಾ 540 ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

(ಫೋಟೋ ಇದೆ-ಶ್ರವಣ್ ಕೆ.ಎ., ನೇಹಾ)

LEAVE A REPLY

Please enter your comment!
Please enter your name here