ಪುತ್ತೂರು:ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ,ಸರಕಾರಿ ಆಸ್ಪತ್ರೆಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಽಸಿ ಇತ್ತಂಡದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮುಡ್ನೂರು ಗ್ರಾಮದ ಅಪ್ರಾಪ್ತ ವಿದ್ಯಾರ್ಥಿ ನೀಡಿದ ದೂರಿನಂತೆ, ಮೇ ೯ರಂದು ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಕ್ಲಾಸಿಕ್ ಬೇಕರಿಯಲ್ಲಿ ಜ್ಯೂಸ್ ಕುಡಿದ ಗ್ಲಾಸನ್ನು ಸರಿಯಾಗಿ ಗಮನಿಸದೆ ಅಲ್ಲೇ ಇದ್ದ ಇನ್ನೋರ್ವ ಗೋಳಿತೊಟ್ಟು ಗ್ರಾಮದ ಅಪ್ರಾಪ್ತ ವಿದ್ಯಾರ್ಥಿಯ ಮೊಬೈಲ್ ಮೇಲೆ ಇಟ್ಟಿದ್ದರು.ಇದೇ ವಿಚಾರದಲ್ಲಿ ಇಬ್ಬರಿಗೂ ಮಾತಿಗೆ ಮಾತು ಬೆಳೆದು ಅವಾಚ್ಯವಾಗಿ ಬೈದು ಹಲ್ಲೆ ನಡೆದಿತ್ತು.ಘಟನೆ ತಿಳಿದು ಚಿಕ್ಕಮುಡ್ನೂರು ಗ್ರಾಮದ ಅಪ್ರಾಪ್ತ ವಿದ್ಯಾರ್ಥಿಯ ಸಹೋದರ ಸ್ಥಳಕ್ಕೆ ಬಂದು ಗಾಯಗೊಂಡ ತಮ್ಮನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯ ವಠಾರದಲ್ಲಿ ಹೋಗುತ್ತಿರುವಾಗಲೇ ಗೋಳಿತ್ತೊಟ್ಟು ಗ್ರಾಮದ ಅಪ್ರಾಪ್ತ ವಿದ್ಯಾರ್ಥಿಯ ಕಡೆಯವರು ಕಾರಿನಲ್ಲಿ ಬಂದು ಚಿಕ್ಕಮುಡ್ನೂರು ಗ್ರಾಮದ ಅಪ್ರಾಪ್ತ ವಿದ್ಯಾರ್ಥಿ ಮತ್ತು ಆತನ ಸಹೋದರನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿ ತೆರಳಿದ್ದಾರೆಂದು ಆರೋಪಿಸಲಾಗಿದೆ. ಪೊಲೀಸರು ಕಲಂ:341, 323, 324, 504,506,ಜೊತೆಗೆ 34 ಐಪಿಸಿರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮತ್ತೊಂದು ಕಡೆ,ಗೋಳಿತ್ತೊಟ್ಟು ಗ್ರಾಮದ ಅಪ್ರಾಪ್ತ ವಿದ್ಯಾರ್ಥಿಯ ಕಡೆಯಿಂದ ನೀಡಿದ ದೂರನ್ನು ಕೂಡಾ ಪೊಲೀಸರು ಸ್ವೀಕರಿಸಿದ್ದಾರೆ.504,323,506,ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.