ಪುತ್ತೂರು: ಕರ್ನಾಟಕ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಭೋಜೇ ಗೌಡರವರು ಮೇ.19ರಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ರವರನ್ನು ಮಂಗಳೂರಿನಲ್ಲಿ ಭೇಟಿಯಾಗಿ ಚುನಾವಣೆಯ ಬಗ್ಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್ ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಎಚ್ ಮಾಲ್ತೇಶ್ ಉಪಸ್ಥಿತರಿದ್ದರು.