ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ 2024-26ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮೇ.17ರಂದು ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಹಾಸಭೆಯಲ್ಲಿ ನೆರವೇರಿಸಲಾಯಿತು.
ನೂತನ ಅಧ್ಯಕ್ಷರಾಗಿ ಪ್ರತಿಮಾ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ತೇಜಸ್ವಿ ಭಟ್, ಕೋಶಾಧಿಕಾರಿಯಾಗಿ ಅಭಿಷೇಕ್ ಸುವರ್ಣ, ಉಪಾಧ್ಯಕ್ಷರಾಗಿ ಪ್ರೊ|ಝೇವಿಯರ್ ಡಿ’ಸೋಜ, ಜೊತೆ ಕಾರ್ಯದರ್ಶಿಯಾಗಿ ಸೋಮಶೇಖರ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರುಫೀನಾ ರೊಡ್ರಿಗಸ್, ಸುನಿಲ್ ಕುಮಾರ್ ಶೆಟ್ಟಿ, ವೆಂಕಟೇಶ್ ಪ್ರಸಾದ್, ಎನ್.ಎಸ್ ನಟರಾಜ್ರವರು ಆಯ್ಕೆಯಾದರು.
ನ್ಯಾಯವಾದಿ ಚಿದಾನಂದ ಬೈಲಾಡಿರವರು ಚುನಾವಣಾಧಿಕಾರಿಯಾಗಿ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮಹಾಸಭೆಯಲ್ಲಿ ಫಿಲೋಮಿನಾ ಕಾಲೇಜು ಪ್ರಾಂಶುಪಾಲ ವಂ|ಡಾ|ಆಂಟನಿ ಪ್ರಕಾಶ್ ಮೊಂತೇರೊ, ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಹಿರಿಯ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ಎ.ಜೆ ರೈ, ಕಾರ್ಯದರ್ಶಿ ತೇಜಸ್ವಿ ಭಟ್, ಕಾಲೇಜಿನ ಪ್ರಥಮ(1958) ಬ್ಯಾಚ್ ವಿದ್ಯಾರ್ಥಿ ನಿವೃತ್ತ ಡಿವೈಎಸ್ಪಿ ಜಗನ್ನಾಥ್ ರೈ ನುಳಿಯಾಲು ಸಹಿತ ಹಲವರು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಳೆದ 24 ವರ್ಷಗಳಿಂದ ತಾನು ನಿರಂತರವಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದೆ. ಇದೀಗ ಹಿರಿಯ ವಿದ್ಯಾರ್ಥಿಗಳ ಒಮ್ಮತದ ಅಭಿಪ್ರಾಯದಂತೆ ತಾನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಕಾಲೇಜಿನ ಉತ್ತುಂಗತೆಯಲ್ಲಿ ಸೇವೆ ಮಾಡಲು ಸಿದ್ಧನಿದ್ದೇನೆ. ಕಳೆದ ಅವಧಿಯಲ್ಲಿ ಎ.ಜೆ ರೈಯವರ ಅಧ್ಯಕ್ಷತೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಮುಂದಿನ ದಿನಗಳಲ್ಲೂ ಇದೇ ಪ್ರೋತ್ಸಾಹ ಮಂದುವರೆಯಲಿ.
–ಪ್ರತಿಮಾ ಹೆಗ್ಡೆ,
ನೂತನ ಅಧ್ಯಕ್ಷೆ, ಹಿರಿಯ ವಿದ್ಯಾರ್ಥಿ ಸಂಘ, ಫಿಲೋಮಿನಾ ಕಾಲೇಜು