ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ:ಕಂಟೈನರ್ – ಇನ್ನೋವಾ ಡಿಕ್ಕಿ- ತಾಯಿ, ಮಗ ದುರ್ಮರಣ

0

  • ನೆಲ್ಯಾಡಿ : ಇನ್ನೋವಾ ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಇನ್ನೋವಾದಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು ನಾಲ್ಕೈದು ಮಂದಿ ಗಾಯ ಗೊಂಡಿರುವ ಘಟನೆ ಮೇ 21 ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ.
  • ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಾರು ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪಿಸುತ್ತಿದ್ದಂತೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡಿದ್ದ ತಾಯಿ, ಮಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here