
ಆಲಂಕಾರು: ಸೀಮಾ ದೇವಸ್ಥಾನ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಮೇ.23ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ,ಕರ್ನಾಟಕ ಸರಕಾರದ ಧಾರ್ಮಿಕ ಪರಿಷತ್ತಿನ ಸದಸ್ಯರಾದ ಮಲ್ಲಿಕಾ ಪಕಳ, ಮಾಜಿ ಸಚಿವರಾದ ಅಂಗಾರ ಎಸ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹಾಗೂ ಸೀಮೆಗೆ ಸಂಬಂಧಪಟ್ಟ ಗ್ರಾ.ಪಂ ಅಧ್ಯಕ್ಷರು, ದೇವಸ್ಥಾನ, ದೈವಸ್ಥಾನದ ಅಡಳಿತ ಮಂಡಳಿಯ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಭಕ್ತಾಧಿಗಳು ಅಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ದ ಆಡಳಿತಾಧಿಕಾರಿ ಗೋಪಾಲ.ಕೆ ಹಾಗೂ ಅರ್ಚಕರು, ಸಿಬ್ಬಂದಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.