ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಗಾರ

0

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರಿಗಾಗಿ ಶೈಕ್ಷಣಿಕ ಕಾರ್ಯಗಾರವು ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಎರಡು ದಿನಗಳ ಕಾಲ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಸಂಚಾಲಕ ವಂ.ಫಾ. ಪ್ರಕಾಶ್ ಪೌಲ್ ಡಿಸೋಜರವರು ಮಾತನಾಡಿ, ಇಂದು ಸ್ಪರ್ಧಾತ್ಮಕ ಯುಗ ,ಈಗ ಜಗತ್ತಿನಲ್ಲಿ ಬದಲಾವಣೆಗಳು ದಿನದಿಂದ ದಿನಕ್ಕೆ ಆಗುತ್ತಿರುತ್ತವೆ. ಶಿಕ್ಷಣ ಕ್ಷೇತ್ರದಲ್ಲಿಯೂ ಬದಲಾವಣೆಗಳು ನಡೆಯುತ್ತಿವೆ, ಹಾಗೆಯೇ ಶಿಕ್ಷಕರು ಕೂಡ ಬೋಧನಾ ವಿಧಾನವನ್ನು ನವೀಕರಿಸಿಕೊಳ್ಳಬೇಕಾಗಿದೆ. ಆದುದರಿಂದ ಈ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತುದಾರರಾದ ಶಂಕರ್ ದೇವಗುಪ್ತ , ಸುನಿಲ್ ಬಿ .ಎನ್, ಗೋಬಿಂದ ಪಾತ್ರ ಇವರು ಶಿಕ್ಷಕರಿಗೆ ತರಬೇತಿ ನೀಡಿದರು. ವೇದಿಕೆಯಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ. ಫಾ. ಅಮಿತ್ ಪ್ರಕಾಶ್ ಪ್ರಕಾಶ್ ರೋಡ್ರಿಗಸ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷ ಹಾಗೂ ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಲತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here