ಸರ್ವೆ ಬಿಲ್ಲವ ಗ್ರಾಮ ಸಮಿತಿ ಮಹಾಸಭೆ – ಉಚಿತ ಪುಸ್ತಕ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸರ್ವೆ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಭಕ್ತಕೋಡಿ ಶ್ರೀರಕ್ಷಾ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಸಮಿತಿ ಅಧ್ಯಕ್ಷ ರಾಮಕೃಷ್ಣ ಸರ್ವೆದೋಳಗುತ್ತು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಬಿಲ್ಲವ ಸಂಘದ ಪ್ರ.ಕಾರ್ಯದರ್ಶಿ ಚಿದಾನಂದ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು.
ಅತಿಥಿಗಳಾಗಿ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ ಟಿ ಮಹೇಶ್ಚಂದ್ರ ಸಾಲಿಯಾನ್, ಗುರು ಮಂದಿರದ ಸದಸ್ಯ ಸಜ್ಜನ್ ಕುಮಾರ್ ಕಣ್ಣರ್ನೂಜಿ, ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಸರ್ವೆದೋಳಗುತ್ತು, ಸದಸ್ಯ ಕಮಲೇಶ್ ಸರ್ವೆದೋಳಗುತ್ತು, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಆನಂದ ಪೂಜಾರಿ ಕೆ ಸರ್ವೆದೋಳಗುತ್ತು, ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಎಸ್ ಡಿ ಅಲೇಕಿ, ಮಹಿಳಾ ಘಟಕದ ಅಧ್ಯಕ್ಷೆ ಜಲಜ ಅಶೋಕ ಎಸ್ ಡಿ ಮೊದಲಾದವರು ಸಭೆಯನ್ನುದ್ದೇಶಿಸಿ ಮಾತನಾಡಿದರು.


ಮುಂಡೂರು ಗ್ರಾ.ಪಂನ ನೂತನ ಅಧ್ಯಕ್ಷರಾದ ಚಂದ್ರಶೇಖರ್ ಎನ್‌ಎಸ್‌ಡಿ ಸರ್ವೆದೋಳಗುತ್ತು ಅವರನ್ನು ಗ್ರಾಮ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96 ಅಂಕಗಳನ್ನು ಪಡೆದು, ರಾಷ್ಟ್ರಮಟ್ಟದ ಜೆಇಇ ಪರೀಕ್ಷೆಯಲ್ಲಿ 998ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ ವಿಜಯ್ ಕುಮಾರ್ ಸೊರಕೆ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರ ನಿಶಾನ್ ಕುಮಾರ್ ಸೊರಕೆ ಅವರನ್ನು ಸನ್ಮಾನಿಸಲಾಯಿತು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 92 ಅಂಕಗಳನ್ನು ಪಡೆದ ಉಮೇಶ್ ಸರ್ವೆದೋಳಗುತ್ತು ಹಾಗೂ ಅನಿತಾ ದಂಪತಿಗಳ ಪುತ್ರಿ ಸಂಜನಾ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಸುರೇಶ್ ಸರ್ವೆದೋಳಗುತ್ತು ಹಾಗೂ ಕಲಾವತಿ ದಂಪತಿಗಳ ಪುತ್ರಿ ತನ್ವಿ ಎಸ್ ಡಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಶಾಂತಪ್ಪ ಪೂಜಾರಿ ಭಕ್ತಕೋಡಿ ಹಾಗೂ ಗುಲಾಬಿ ದಂಪತಿಗಳ ಪುತ್ರಿಯರಾದ ಪ್ರತೀಕ್ಷ ಹಾಗೂ ಜನನಿ, ಪದವಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ರಾಮಕೃಷ್ಣ ಸರ್ವೆದೋಳಗುತ್ತು ಹಾಗೂ ಶೋಭಾ ದಂಪತಿಗಳ ಪುತ್ರ ಪ್ರಮಿತ್ ಅವರನ್ನು ಗೌರವಿಸಲಾಯಿತು.

ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಬಿಲ್ಲದ ಗ್ರಾಮ ಸಮಿತಿಗೆ ಒಳಪಟ್ಟ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು. ಸಂಘದ ಅಧ್ಯಕ್ಷ ರಾಮಕೃಷ್ಣ ಸರ್ವೆದೋಳಗುತ್ತು ಮಾತನಾಡಿ ಸಂಘದ ವತಿಯಿಂದ ಅನಾರೋಗ್ಯಕ್ಕೆ ತುತ್ತಾದ ಆರ್ಥಿಕವಾಗಿ ಹಿಂದುಳಿದ ಗ್ರಾಮದ ಸಮಿತಿ ಸದಸ್ಯರ ಚಿಕೆತ್ಸೆಗೆ ಸಹಾಯಧನ ನೀಡಲಾಗುತ್ತಿದೆ, ಆರ್ಥಿಕವಾಗಿ ಹಿಂದುಳಿದ ಅರ್ಹ ಹೆಣ್ಣು ಮಕ್ಕಳ ವಿವಾಹಕ್ಕೆ ಸಹಾಯಧನ ನೀಡಲಾಗುತ್ತಿದೆ, ವಿದ್ಯಾರ್ಥಿ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಗ್ರಾಮ ಸಮಿತಿಯ ಕಾರ್ಯ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ನೀಡುತ್ತಿರುವ ಸಮಾಜ ಬಾಂಧವರಿಗೆ ಧನ್ಯವಾದ ಸಲ್ಲಿಸಲಾಯಿತು. ಗ್ರಾಮ ಸಮಿತಿ ಗೌರವಾಧ್ಯಕ್ಷ ಶಶಿಧರ್ ಎಸ್ ಡಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕುಮಾರಿ ವೈಶಾಲಿ ಪ್ರವೀಣ್ ಎಸ್ ಡಿ ಪ್ರಾರ್ಥಿಸಿದರು. ಪ್ರಧಾನ ಕಾರ್ಯದರ್ಶಿ ಗೌತಮ್ ಪೂಜಾರಿ ಪಟ್ಟೆಮಜಲು ವಾರ್ಷಿಕ ವರದಿ ಮಂಡಿಸಿದರು. ಮಹಿಳಾ ಘಟಕದ ಕಾರ್ಯದರ್ಶಿ ರಜನಿ ರಾಜೇಶ್ ಎಸ್ ಡಿ ವಂದಿಸಿದರು. ಚಂಚಲ ಜಯಪ್ರಕಾಶ್ ಎಸ್ ಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here