ಉಪ್ಪಿನಂಗಡಿ: ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೇ 31ರಂದು ನಡೆಯಿತು.
ಬೆಳಿಗ್ಗೆ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಸಂಸ್ಥೆಯ ಪರಿವೀಕ್ಷಕರಾದ ಬಾಲಕೃಷ್ಣ ಗೌಡ, ಮುಖ್ಯಗುರು ಲಕ್ಷ್ಮಿ ಪಿ, ತಾ.ಪಂ.ಮಾಜಿ ಸದಸ್ಯ ಮುಕುಂದ ಗೌಡ, ಉಪ್ಪಿನಂಗಡಿ ಗ್ರಾ.ಪಂ.ಸದಸ್ಯ ಸುರೇಶ್ ಅತ್ರಮಜಲು, ವಿಶ್ವನಾಥ ಗೌಡ ಮಾಯಿತ್ತಾಲ್, ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಗೌಡ ನೆಕ್ಕರಾಜೆ, ಸದಸ್ಯ ಸಂತೋಷ್ ಪಂರ್ದಾಜೆ, ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಗೌಡ ನೆಡ್ಚಿಲ್, ಸದಸ್ಯರಾದ ಶೀನಪ್ಪ ಗೌಡ, ಮಧುರ, ಹಬೀಬಾ ಉಪಸ್ಥಿತರಿದ್ದರು.
ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಆಕರ್ಷಕ ಮೆರವಣಿಗೆ ಮೂಲಕ ವಿದ್ಯಾರ್ಥಿಗಳನ್ನು ಆರತಿ ಬೆಳಗಿಸಿ ಬರಮಾಡಿಕೊಂಡು ಸ್ವಾಗತಿಸಲಾಯಿತು. ದಾನಿಗಳಾದ ಬೆಂಗಳೂರಿನ ಉದ್ಯಮಿ ನಟೇಶ್ ಪೂಜಾರಿಯವರು ನೀಡಿದ 20 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ವಿತರಿಸಲಾಯಿತು. ಇಲಾಖಾ ವತಿಯಿಂದ ಸರಬರಾಜಾದ ಪಠ್ಯ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಲಕ್ಷ್ಮಿ ಪಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಶಕುಂತಲಾ ಕೆ ವಂದಿಸಿದರು. ಶಿಕ್ಷಕರಾದ ಮೋಹನ್ ಹೆಚ್, ರಜನಿ ಹೆಚ್, ಭವ್ಯ ವೈ, ಡೊಂಬಯ ಗೌಡ ಸಹಕರಿಸಿದರು. ಸವಿತಾ ಪಿ.ಸಿ ಕಾರ್ಯಕ್ರಮ ನಿರೂಪಿಸಿದರು.