ರಾಮಕುಂಜೇಶ್ವರ ಕ.ಮಾ.ಪ್ರೌಢಶಾಲೆಯ ಪ್ರಾರಂಭೋತ್ಸವ, ಸನ್ಮಾನ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಬಲವರ್ಧನೀಯ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು.

ವಿದ್ಯಾರ್ಥಿಗಳನ್ನು ಮೆರವಣಿಗೆಯೊಂದಿಗೆ ಶಾಲೆಗೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಡಬ ತಾಲೂಕು ಉಪ ತಹಶೀಲ್ದಾರ್ ಗೋಪಾಲ ಅವರು ನೆರವೇರಿಸಿ, ಶಾಲಾ ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿ ನಿವೃತ್ತ ಸೇನಾನಿ ಮತ್ತು ಫಾರೆಸ್ಟರ್ ಜಯಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಅನುಭವದಿಂದ ಕೂಡಿದ ಮಾರ್ಗದರ್ಶನ ಮಾಡಿದರು. ಅತಿಥಿಗಳನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.
ಸುಮಾರು 23 ವರ್ಷಗಳ ಕಾಲ ಸುದೀರ್ಘ ಸೇವೆಯನ್ನ ಸಲ್ಲಿಸಿದ ಶಾಲಾ ಹಿರಿಯ ಶಿಕ್ಷಕರಾದ ಮನಮೋಹನ್ ರೈ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶಾಲಾ ಶಿಕ್ಷಕರಾದ ಪ್ರವೀಣ್ ಕುಮಾರ್ ಅವರು ಸನ್ಮಾನಿತರ ಪರಿಚಯವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಸರಕಾರದಿಂದ ನೀಡುವಂತಹ ಉಚಿತ ಪಠ್ಯಪುಸ್ತಕವನ್ನು ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ಶಿಕ್ಷಕರಾದ ವೆಂಕಟೇಶ ದಾಮ್ಲೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಪವನ್ ಕುಮಾರ್ ವಂದಿಸಿದರು. ವಿದ್ಯಾರ್ಥಿಗಳಾದ ನವಮಿ, ಅನುಶ್ರೀ, ಊರ್ಮಿಳ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here