





ಪುತ್ತೂರು: ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಗೋಪಾಲಕೃಷ್ಣ ಕುಂಜತ್ತಾಯ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಸ್ಥೆಯ ಸಂಚಾಲಕ ಸರ್ವೋತ್ತಮ್ ಬೋರ್ಕರ್ ಮಾತನಾಡಿ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಗಳಿಸಿದ್ದಕ್ಕಾಗಿ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿದರು ಹಾಗೂ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ತಾವು ಯಾವ ರೀತಿ ಶೈಕ್ಷಣಿಕ ಪ್ರಗತಿಯನ್ನು ಸಾಧಿಸಬಹುದು ಎಂದು ತಿಳಿಸಿದರು.





ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕಿ ಸುಪ್ರಭಾ ಪಿ ಇವರು ಶಾಲೆಯ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿಜ್ಞಾನ ಶಿಕ್ಷಕಿ ವಂದನಾ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಗಣಿತ ಶಿಕ್ಷಕಿ ವಿನುತ ಸ್ವಾಗತ ಹಾಗೂ ಇಂಗ್ಲಿಷ್ ಶಿಕ್ಷಕಿ ಪ್ರತಿಮಾ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.









