![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಇಳಂತಿಲ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಘಟನೆಯಿಂದ ದ್ವಿ ಚಕ್ರ ವಾಹನ ಸವಾರ ಸಿ.ಸಿ. ಪೌಲೋಸ್ (72) ಹಾಗೂ ಹಿಂಬದಿ ಸವಾರೆ ಜಯಲಕ್ಷ್ಮಿ (64) ಎಂಬವರು ಗಂಭೀರವಾಗಿ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ನವೀನ್ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://puttur.suddinews.com/wp-content/uploads/2024/06/Untitled-1-3.jpg)