ಉಪ್ಪಿನಂಗಡಿ ಅರಫಾ ಆಂಗ್ಲಮಾಧ್ಯಮ ಶಾಲಾ ಪ್ರಾರಂಭೋತ್ಸವ

0

ಉಪ್ಪಿನಂಗಡಿ: ಅರಫಾ ಆಂಗ್ಲಮಾಧ್ಯಮ ಶಾಲೆ ಉಪ್ಪಿನಂಗಡಿ ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.


ಶಾಲೆಯ ಸಂಚಾಲಕರಾಗಿರುವ ಹಾ.ಜಿ ಕೆ.ಪಿ ಸಿದ್ದೀಕ್‌ರವರು ಕಾರ‍್ಯಕ್ರಮ ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು. ಶಾಲೆಯ ಮುಖೋಪಾಧ್ಯಾಯರಾದ ಕವಿತ ಅವರು ದಿನದ ಮಹತ್ವದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲೆಯನ್ನು ಶೃಂಗರಿಸಿ ಮಕ್ಕಳಿಗೆ ಹೂ ಮತ್ತು ಸಿಹಿ ತಿಂಡಿಗಳನ್ನು ಹಂಚಿ ಬರಮಾಡಿಕೊಳ್ಳಲಾಯಿತು. ಶಿಕ್ಷಕಿ ಸಿಮಿ ಸ್ವಾಗತಿಸಿದರು. ಶಿಕ್ಷಕಿ ಅಫ್ರತ್ ಕಾರ‍್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯರು, ಶಿಕ್ಷಕರು, ಉಪಸಿತ್ಥರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here