ಬೆಳಂದೂರು ಈಡನ್ ಗ್ಲೋಬಲ್ ಶಾಲಾ ಪ್ರಾರಂಭೋತ್ಸವ

0

ಬೆಳಂದೂರು: ಈಡನ್ ಗ್ಲೋಬಲ್ ಶಾಲೆಯ 2024-25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ಅದ್ದೂರಿಯಿಂದ ಸ್ವಾಗತಿಸಲಾಯಿತು.ಮಕ್ಕಳ ಪ್ರಾರ್ಥನೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಮೊದಲ ದಿನವನ್ನು ಫಸ್ಟ್ ಬೆಲ್ ಎಂಬ ಶೀರ್ಷಿಕೆಯಿಂದ ಸಂಕೇತಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ ರಂಝೀ ಮುಹಮ್ಮದ್ ಅತಿಥಿಗಳನ್ನು ಸ್ವಾಗತಿಸಿ ಮಕ್ಕಳಿಗೆ ಶುಭ ಹಾರೈಸಿದರು. ನಂತರ ಕಾರ್ಯಕ್ರಮದ ಅಧ್ಯಕ್ಷರಾದ ಪುತ್ತು ಬಾವ ಹಾಜಿ ಅಧ್ಯಕ್ಷೀಯ ಭಾಷಣ ಗೈದರು. ಅಕಾಡೆಮಿಕ್ ಕಾರ್ಡಿನೇಟರ್ ಗಳಾದ ಅರ್ಪಿತ ಮತ್ತು ಶ್ರುತಿ ತಮ್ಮ ಭಾಷಣದಲ್ಲಿ ಮಕ್ಕಳ ಶೈಕ್ಷಣಿಕ ವರ್ಷದ ವಿವರಗಳನ್ನು ನೀಡಿದರು.ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಬಶೀರ್ ಹಾಜಿ, ಅರೇಬಿಕ್ ವಿಭಾಗದ ಮುಖ್ಯಸ್ಥ ರಶೀದ್ ಸಖಾಫಿ, ಪೋಷಕರಾದ ರಝಾಕ್, ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಕುಮಾರಿ ಫಹೀಮಾ ವಂದಿಸಿದರು.

LEAVE A REPLY

Please enter your comment!
Please enter your name here