“ಮಗುವಿನ ಹುಟ್ಟಿನಿಂದ ಕೊನೆಯವರೆಗೆ ಸಾಧನೆ ನಡೆಯುತ್ತಾ ಇರುತ್ತದೆ.ಸಾಧನೆ ಹಂತ ಹಂತವಾಗಿ ವಿಭಿನ್ನವಾಗಿ ಇರುತ್ತದೆ ಹಾಗೂ ಅಭಿನಂದನೆಗೂ ಅರ್ಹವಾಗಿರುತ್ತದೆ”. ಡಾ.ಕೃಷ್ಣ ಭಟ್ ಕೊಂಕೋಡಿ.
ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023- 24 ರ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳನ್ನು ಗೌರವಿಸುವ ಸಾಧನಾಭಿವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು ವಿದ್ಯಾರ್ಥಿಗಳು ತಾನು ಕಲಿತ ಶಾಲೆಯ ಜೊತೆ ಯಾವಾಗಲೂ ಸಂಪರ್ಕವನ್ನು ಇಟ್ಟುಕೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೆ ಎಂ ಕೃಷ್ಣ ಭಟ್ ದೀಪ ಬೆಳಗಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಶಾಲೆಯ ಹಿರಿಯ ವಿದ್ಯಾರ್ಥಿ ನಡುಸಾರು ಶ್ರೀ ಚಿನ್ಮಯ ಭಟ್ಟ ಆಗಮಿಸಿ,ತಾನು ವಿದ್ಯಾರ್ಥಿಯಾಗಿದ್ದ ಕಾಲದಲ್ಲಿನ ಶಾಲೆಯ ಸವಾಲಿನ ದಿನಗಳನ್ನು ಮೆಲುಕು ಹಾಕಿದರು. ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ದಿನಗಳಿಗೆ ಹೇಗೆ ಸಿದ್ಧರಾಗಬೇಕು ಎಂಬದನ್ನು ತನ್ನ ಅನುಭವದ ಮೂಲಕ ಹೇಳಿದರು. ಇನ್ನೋರ್ವ ಹಿರಿಯ ವಿದ್ಯಾರ್ಥಿನಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಶಾಲಾ ಹಿರಿಯ ವಿದ್ಯಾರ್ಥಿನಿ ಕು ತೇಜಸ್ವಿನಿ . ವಿ. ಶೆಟ್ಟಿ ಶಾಲೆಗೆ ಶೇಕಡಾ ೧೦೦ ಫಲಿತಾಂಶವನ್ನು ತಂದಿರುವ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ ವಹಿಸಿ, ಶಿಕ್ಷಣವು ಮಕ್ಕಳಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬಿದಾಗ ಕಲಿಕಾ ಪ್ರಕ್ರಿಯೆ ಸುಲಭವಾಗುತ್ತದೆ ಎಂದರು.
ವೇದಿಕೆಯಲ್ಲಿ ಶಾಲಾ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಜಯಂತ ಗೌಡ , ಶಾಲಾ ಆಡಳಿತ ಮಂಡಳಿಯ ಸಂಚಾಲಕ ವಸಂತ ಸುವರ್ಣ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ನಳಿನಿ ಉಪಸ್ಥಿತರಿದ್ದರು. ಹತ್ತನೆಯ ತರಗತಿಯ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕಿ ಶ್ರೀಲತಾ ಅಭಿನಂದನಾರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಆಶಾ ಬೆಳ್ಳಾರೆ ಅತಿಥಿಗಳನ್ನು ಸ್ವಾಗತಿಸಿ , ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕ ಚಂದ್ರಶೇಖರ ಸುಳ್ಯಪದವು ವಂದಿಸಿದರು. ಶಿಕ್ಷಕಿ ಗೀತಾ ವಂದಿಸಿದರು.