ನೆಲ್ಯಾಡಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ ಬಜತ್ತೂರು ಹಾಗೂ ಬಿಲ್ಲವ ಮಹಿಳಾ ಗ್ರಾಮ ಸಮಿತಿ ಬಜತ್ತೂರು ಇದರ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.2ರಂದು ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಸಮಿತಿ ಅಧ್ಯಕ್ಷ ಸೋಮಸುಂದರ್ ಕೊಡಿಪ್ಪಾನ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಿ ಮಾತನಾಡಿ, ಬಜತ್ತೂರು ಗ್ರಾಮ ಸಮಿತಿಯ ಕಾರ್ಯಚಟುವಟಿಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿದ್ದ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷ, ಉಪ್ಪಿನಂಗಡಿ ವಲಯ ಸಂಚಾಲಕರೂ ಆದ ಅಶೋಕ್ ಕುಮಾರ್ ಪಡ್ಪು, ತಾಲೂಕು ಸಂಘದ ಉಪಾಧ್ಯಕ್ಷೆ ವಿಮಲಸುರೇಶ್, ಬಜತ್ತೂರು ಗ್ರಾ.ಪಂ.ಸದಸ್ಯ ಮಾಧವ ಪೂಜಾರಿ ಒಂರ್ಬೋಡಿ ಶುಭ ಹಾರೈಸಿದರು.
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಗ್ರಾಮದ ಬಿಲ್ಲವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ಮೋನಪ್ಪ ಪೂಜಾರಿ ಡೆಂಬಲೆ, ಮಹಿಳಾ ಸಮಿತಿಯ ಅಧ್ಯಕ್ಷೆ ಮಮತಾ ನೀರಕಟ್ಟೆ ಉಪಸ್ಥಿತರಿದ್ದರು. ರಮ್ಯಾ ಪ್ರಾರ್ಥಿಸಿದರು. ಸುನಿತಾ ಸ್ವಾಗತಿಸಿ, ಮಮತಾ ವಂದಿಸಿದರು. ಶಶ್ವಿನಿ ಎನ್. ಕಾರ್ಯಕ್ರಮ ನಿರೂಪಿಸಿದರು.