ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ 5 ರಂದು ವಿವಿಧ ರೀತಿಯ ಸಸ್ಯಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಪ್ರಗತಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಸಸಿಯನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರಲ್ಲದೆ, ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ವಿದ್ಯಾರ್ಥಿಯಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡದೆ ಸಂರಕ್ಷಿಸುವುದು ಎಂದು ಹೇಳಿದರು.

ವಿದ್ಯಾರ್ಥಿಗಳು ವಿವಿಧ ರೀತಿಯ ತರಕಾರಿ ಬೀಜಗಳನ್ನು ತಂದು ಸಸಿ ನೆಡುವಲ್ಲಿ ಮತ್ತು ಬೀಜ ಬಿತ್ತನೆ ಮಾಡುವಲ್ಲಿ ಹಾಗೂ ಪರಿಸರ ಸ್ವಚ್ಛತಾ ಕಾರ್ಯದಲ್ಲಿ ಸಕ್ರೀಯವಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಸಹ ಆಡಳಿತಾಧಿಕಾರಿ ಹೇಮನಾಗೇಶ್ ರೈ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್, ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ, ಹಿರಿಯ ಶಿಕ್ಷಕಿ ಸವಿತ ಕೆ ಮತ್ತು ಎಲ್ಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಶಿಕ್ಷಕಿಯರಾದ ಚಿತ್ರಕಲಾ ಟಿ, ಭುವನೇಶ್ವರಿ ಬಿ, ವಿಮಲಾ ಸಿ ಎಚ್, ಭವಾನಿ ಸಿ ಇವರು ಕಾರ್ಯಕ್ರಮವನ್ನು ಸಂಘಟಿಸಿದರು.

LEAVE A REPLY

Please enter your comment!
Please enter your name here