ಮರಗಿಡಗಳು ಉತ್ತಮ ಆರೋಗ್ಯಕ್ಕೆ ಪೂರಕ – ವಿಶ್ವ ಪರಿಸರ ದಿನಾಚರಣೆಯಲ್ಲಿ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಸರಿತಾ ಡಿ

0

ಪುತ್ತೂರು: ಮರಗಿಡಗಳನ್ನು ನೆಡುವುದು ಮಾತ್ರವಲ್ಲ ಪೋಷಿಸಬೇಕು. ಇದು ಉತ್ತಮ ಆರೋಗ್ಯಕ್ಕೆ ಪೂರಕ ಎಂದು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ ಅವರು ಹೇಳಿದರು.
ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಅರಣ್ಯ ಇಲಾಖೆಯಿಂದ ಪುತ್ತೂರು ಆನೆಮಜಲಿನಲ್ಲಿರುವ ನೂತನ ನ್ಯಾಯಾಲಯ ಸಂಕೀರಣದಲ್ಲಿ ಅವರು ಗಿಡ ನಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡಿದರು. ಎಲ್ಲರು ಗಿಡಗಳನ್ನು ನೆಟ್ಟು ಪೋಷಿಸುವಂತೆ ಮನವಿ ಮಾಡಿದರು.
ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ ಅವರು ಮಾತನಾಡಿ ಪ್ರತಿಯೊಂದು ಮನೆಯಲ್ಲೂ ಗಿಡ ನೆಡುವ ಕಾರ್ಯಕ್ರಮ ಆಗಬೇಕೆಂದರು ಮನವಿ ಮಾಡಿದರು. ಪ್ರಧಾನ ಸಿವಿಲ್ ನ್ಯಾಯಾಲಯ, ಜೆಎಮ್‌ಎಫ್‌ಸಿ ನ್ಯಾಯಾಧೀಶೆ ಅರ್ಚನಾ ಕೆ ಉನ್ನಿತಾನ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್‌ಎಫ್‌ಸಿ ಯೋಗೇಂದ್ರ ಶೆಟ್ಟಿ, ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಶಿವಣ್ಣ ಎಚ್ ಆರ್ ಗಿಡಗಳನ್ನು ನೆಟ್ಟರು. ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಎಮ್, ವಕೀಲರ ಸಂಘದ ಉಪಾಧ್ಯಕ್ಷ ಮೋನಪ್ಪ ಎನ್, ವಕೀಲರ ಸಂಘದ ಕೋಶಾಧಿಕಾರಿ ಮಹೇಶ್ ಕೆ.ಸವಣೂರು, ಜೊತೆ ಕಾರ್ಯದರ್ಶಿ ಮಮತ ಸುವರ್ಣ, ನಿಕಟಪೂರ್ವ ಜೊತೆಕಾರ್ಯದರ್ಶಿ ಸೀಮಾ ನಾಗರಾಜ್, ವಕೀಲರಾದ ಪ್ರೀತಿ, ಅಕ್ಷತಾ, ಪ್ರಿಯಾ ಮಹೇಶ್, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಕನಿಷ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here