ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಪೂರ್ಣಿಮಾ ನಾಯಕ್ ಎಂಬವರು ಆಗಮಿಸಿ ಅಧಿಕಾರ ಸ್ವೀಕರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರೌಢಶಾಲಾ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರವರು ಮೇ.31ರಂದು ನಿವೃತ್ತಿ ಹೊಂದಿದ್ದು, ಇವರಿಂದ ತೆರವಾಗಿರುವ ಸ್ಥಾನಕ್ಕೆ ಪೂರ್ಣಿಮಾ ನಾಯಕ್ರನ್ನು ನಿಯೋಜಿಸಲಾಗಿದೆ.
ಪೂರ್ಣಿಮಾ ನಾಯಕ್ ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯಲ್ಲಿ ಸಮಾಜ-ವಿಜ್ಞಾನ ವಿಷಯದ ಶಿಕ್ಷಕಿಯಾಗಿದ್ದರು. ಪ್ರಸ್ತುತ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗಕ್ಕೆ ವರ್ಗಾವಣೆ ಹೊಂದಿದ್ದಾರೆ.