ಮಾಯಿದೆ ದೇವುಸ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ಮಾಯಿದೆ ದೇವುಸ್ ಹಿ.ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ, ಪರಿಸರ ಗೀತೆ, ಪರಿಸರದ ಘೋಷಣೆಗಳು ಕಾ‌ರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು. ಶಾಲಾ ಮುಖ್ಯೋಪಾಧ್ಯಾಯಿನಿ ಜಾನೆಟ್ ಡಿಸೋಜ ಎಲ್ಲಾ ತರಗತಿಯ ಮಕ್ಕಳಿಗೆ ಒಂದೊಂದು ಗಿಡಗಳನ್ನು ನೀಡಿ ತಾವೇ ನೆಡುವಂತೆ ಸೂಚಿಸಿ, ಅದನ್ನು ಪೋಷಿಸಿ ಬೆಳೆಸುವ ಕ್ರಮಗಳನ್ನು ವಿವರಿಸಿದರು. ಎಳವೆಯಲ್ಲಿ ಮಕ್ಕಳಲ್ಲಿ ಪರಿಸರ ಪ್ರೇಮ ತುಂಬುವಂತೆ ಪ್ರೋತ್ಸಾಹಿಸಿದರು. ಪರಿಸರ ಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here