ಅಸಂಖ್ಯಾತ ವಿದ್ಯಾರ್ಥಿಗಳ ಆಶಾಕಿರಣ ವಿವೇಕಾನಂದ ವಿದ್ಯಾಸಂಸ್ಥೆ: ಡಾ.ಕಲ್ಲಡ್ಕ ಪ್ರಭಾಕರ್ ಭಟ್

0

*ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮೆರೆದ ಯುಕ್ತಾ ವಿ. ಜಿ. ಗೆ ಸನ್ಮಾನ
*ಪುತ್ತೂರು ತಾಲೂಕಿಗೆ ವಿವೇಕಾನಂದ ವಿದ್ಯಾರ್ಥಿನಿ ಪ್ರಥಮ ಸ್ಥಾನಿ

ವ್ಯೆದ್ಯಕೀಯ ಶಿಕ್ಷಣಕ್ಕಾಗಿ ಕೇಂದ್ರ ಸರಕಾರವು ನಡೆಸಿದ 2024ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ 720ಕ್ಕೆ 651 ಅಂಕಗಳೊಂದಿಗೆ ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 604ನೇ ರ್‍ಯಾಂಕ್ ಗಳಿಸಿ ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನಿಯಾದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ವಿ.ಜಿ. (ರಾಮಕುಂಜದ ವಿಜಯ ವಿಕ್ರಮ ಜಿ. ಹಾಗೂ ಸುನಿತಾ. ಎಮ್.ಕೆ. ದಂಪತಿ ಪುತ್ರಿ) ಅವರನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್‌ ಅವರು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ “ವಿವೇಕಾನಂದ ವಿದ್ಯಾಸಂಸ್ಥೆಗಳು ಆರು ದಶಕಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ವಿವೇಕಾನಂದ ವಿದ್ಯಾಸಂಸ್ಥೆಗಳು ಅದೆಷ್ಟು ಗ್ರಾಮೀಣ ವಿದ್ಯಾರ್ಥಿಗಳ ಆಶಾಕಿರಣವಾಗಿದೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನರ್ಹ ಸಾಧನೆಯನ್ನು ಮಾಡಿದ್ದಾರೆ. ಇಂದು ರಾಮಕುಂಜದಂತಹ ಗ್ರಾಮೀಣ ಪ್ರದೇಶದಿಂದ ಬಂದು ನಮ್ಮ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಮ್ಮ ಶಿಕ್ಷಕರ ಮಾರ್ಗದರ್ಶನದಲ್ಲಿ ತರೆಬೇತಿ ಪಡೆದ ನಮ್ಮ ಹೆಮ್ಮೆಯ ವಿದ್ಯಾರ್ಥಿನಿ ಯುಕ್ತಾ ವಿ. ಜಿ. ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ 604ನೇ ರ್‍ಯಾಂಕ್ ಗಳಿಸಿದ್ದಾಳೆ. ನಿರಂತರ ತೊಡಗುವಿಕೆ ಹಾಗೂ ಸತತ ಪರಿಶ್ರಮದಿಂದ ಮಾತ್ರ ಈ ಸಾಧನೆ ಸಾಧ್ಯ. ಹೃದ್ರೋಗ ತಜ್ಞೆ ಆಗಬೇಕು ಎಂಬ ಯುಕ್ತಾಳ ಹಂಬಲ ಆಕೆಯ ಹೃದಯವಂತಿಕೆಗೆ ಸಾಕ್ಷಿ. ಈ ಸಾಧನೆಗೆ ಬೆಂಬಲ ನೀಡಿದ ವಿದ್ಯಾರ್ಥಿನಿಯ ಹೆತ್ತವರಿಗೆ, ಮಾರ್ಗದರ್ಶನ ನೀಡಿದ ಉಪನ್ಯಾಸಕ ವೃಂದದವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.


ಸನ್ಮಾನ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ಯುಕ್ತಾ ವಿ ಜಿ “ನೀಟ್ ಪ್ರವೇಶ ಪರೀಕ್ಷೆಯಲ್ಲಿ ಈ ಸಾಧನೆ ಮಾಡಲು ಕಾರಣವಾದ ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಹಾಗೂ ಇಲ್ಲಿನ ಉಪನ್ಯಾಸಕರಿಗೆ ಹಾಗೂ ಹೆತ್ತವರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಕಾಲೇಜಿನ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾದ ಉಪನ್ಯಾಸಕರನ್ನು ಹಾಗೂ ತರಬೇತಿ ಸಂಯೋಜಕರನ್ನು ಗೌರವಿಸಲಾಯಿತು. ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್‌ರಾವ್, ವಿವೇಕಾನಂದ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಆಕ್ಸೆನ್ಚೆರ್ ಬಹುರಾಷ್ಟ್ರೀಯ ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕ ಪುರುಷತ್ತಮ ಕಡಂಬು, ಮತ್ತೋರ್ವ ಹಿರಿಯ ವಿದ್ಯಾರ್ಥಿ ಕೇರಳ ಪೊಲೀಸ್‌ ಇಲಾಖೆಯ ನಿವೃತ್ತ ಡಿ.ವೈ.ಎಸ್.ಪಿ. ಶ್ರೀರಾಮ ತಲೆಂಗಳ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ವಿವೇಕಾನಂದ ಪದವಿ ಕಾಲೇಜಿನ ಸಂಚಾಲಕರಾದ ಮುರಳಿಕೃಷ್ಣ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್‌ ರೈ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ಶೈಕ್ಷಣಿಕ ಸಂಯೋಜಕ ಶ್ರೀವತ್ಸ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here