ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ವತಿಯಿಂದ ‘ಆರ್ಟ್ ಆಫ್ ಪೇರೆಂಟಿಂಗ್’ ಕಾರ್ಯಕ್ರಮ

0

*ಒಬ್ಬ ವ್ಯಕ್ತಿಗೆ  ಮೌಲ್ಯಾಧಾರಿತ ಶಿಕ್ಷಣ,  ಉತ್ತಮ ಆರೋಗ್ಯ ಇದ್ದರೆ ಆತ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ: ಡಾ.ಅಬ್ದುಲ್ ಬಶೀರ್ ವಿ.ಕೆ

*ಶಿಕ್ಷಕರು, ಹೆತ್ತವರು ಮಕ್ಕಳ ಕಲಿಕೆ ಬಗ್ಗೆ ಹೆಚ್ಚಿನ ಒತ್ತು ನೀಡುವುದು‌ ಅಗತ್ಯ: ಫಾತಿಮಾ ನಸ್ರೀನ ಬಶೀರ್

ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ವತಿಯಿಂದ ಮಕ್ಕಳ ಹೆತ್ತವರ ಸಭೆ ‘ಆರ್ಟ್ ಆಫ್ ಪೇರೆಂಟಿಂಗ್’ ಕಾರ್ಯಕ್ರಮ ನೇರಳಕಟ್ಟೆಯಲ್ಲಿರುವ ಜನಪ್ರಿಯ ಗಾರ್ಡನ್ ನಲ್ಲಿ ಜೂ.7ರಂದು ನಡೆಯಿತು.

ಕಾರ್ಯಕ್ರಮವನ್ನು ಜನಪ್ರಿಯ ಫೌಂಡೇಶನ್ ನ ಚೇರ್ ಮೆನ್ ಡಾ.ಅಬ್ದುಲ್ ಬಶೀರ್ ವಿ.ಕೆ ಅವರು ಉದ್ಘಾಟಿಸಿ, ಮಾತನಾಡಿ ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಒದಗಿಸುವುದು ನನ್ನ ಗುರಿಯಾಗಿದೆ. ಯಾವುದೇ ಒಬ್ಬ ವ್ಯಕ್ತಿಗೆ ಮೌಲ್ಯಾಧಾರಿತ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಇದ್ದರೆ ಆತ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ‌. ಜನಪ್ರಿಯ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಈ ಎರಡು ಕಾರ್ಯಗಳನ್ನು ಬಹಳ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದರು. 

ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷೆ ಫಾತಿಮಾ ನಸ್ರೀನ ಬಶೀರ್ ಅವರು ಮಾತನಾಡಿ ಶಿಕ್ಷಕರು ಮತ್ತು ಹೆತ್ತವರು ಮಕ್ಕಳ ಕಲಿಕೆ ಬಗ್ಗೆ ಹೆಚ್ಚಿನ ಒತ್ತು ನೀಡಿದಾಗ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗುತ್ತದೆ ಎಂದರು. ತರಬೇತುಗಾರರಾಗಿ ಆಗಮಿಸಿದ ಸಜಸ್ ಕೆ.ಜೆ. ಅವರು  ಮಾತನಾಡಿದರು. ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನಿರ್ದೇಶಕ ಎ. ಅರ್. ನೌಶೀನ್ ಬದ್ರಿಯಾ, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್, ಪ್ರಾಂಶುಪಾಲ ಲಿಬಿನ್ ಕ್ಸೇವಿಯರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here