ಪುತ್ತೂರು: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಶ್ರೀ ರಾಮಕೃಷ್ಣ ಸೇವಾ ಸಮಾಜ ಪುತ್ತೂರು, ಸರಕಾರಿ ಸಾರ್ವಜನಿಕ ಆಸ್ಪತ್ರೆ ಪುತ್ತೂರು ಇವರ ಸಹಭಾಗಿತ್ವದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರವು ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿ ಜೂ.11ರಂದು ಬೆಳಿಗ್ಗೆ 9.30 ರಿಂದ 12.30ರವರೆಗೆ ನಡೆಯಲಿದೆ. ರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಸುಬ್ರಮಣ್ಯಂ ಎನ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆನಂದಾಶ್ರಮ ಸೇವಾ ಟ್ರಸ್ಟ್ ಅಧ್ಯಕ್ಷೆ ಡಾ. ಪಿ ಗೌರಿ ಪೈ ಅಧ್ಯಕ್ಷತೆ ವಹಿಸಲಿದ್ದಾರೆ.
ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಚಿಕಿತ್ಸೆ ಮತ್ತು ಸಲಹೆ, ಉಚಿತ ಕಣ್ಣಿನ ಪೊರೆ ಆಪರೇಷನ್ (IOL ಅಳವಡಿಸಿ), ಉಚಿತ ಕನ್ನಡಕ ವಿತರಣೆ ನಡೆಯಲಿದೆ. ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ಸಂಚಾರಿ ನೇತ್ರ ಘಟಕ ಹಾಗೂ ಮಂಗಳೂರಿನ ಖ್ಯಾತ ಜಿಲ್ಲಾ ಆಸ್ಪತ್ರೆ ಇವರ ಸಹಯೋಗದೊಂದಿಗೆ ಕೆ.ಎಂ.ಸಿಯ ಪ್ರಸಿದ್ಧ ನೇತ್ರ ತಜ್ಞರು ಭಾಗವಹಿಸಲಿದ್ದಾರೆ. ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಉಚಿತವಾಗಿ ಲಭ್ಯ ಕನ್ನಡಕಗಳನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಿ.ಸದಾಶಿವ ಪೈ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು 9980076707ನ್ನು ಸಂಪರ್ಕಿಸಬಹುದು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯುವಂತೆ ಕಾರ್ಯಕ್ರಮ ಸಂಘಟಿತ ಸಂಸ್ಥೆಗಳು ಪ್ರಕಟಣೆಯಲ್ಲಿ ತಿಳಿಸಿದೆ.