ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ಸುರಕ್ಷತೆಯ ಮಾಹಿತಿ ಕಾರ್ಯಾಗಾರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸುರಕ್ಷಾ ಸಮಿತಿಯ ವತಿಯಿಂದ ಮಾಹಿತಿ ಕಾರ್ಯಗಾರ ನಡೆಯಿತು. ಶಾಲಾ ಮುಖ್ಯಗುರು ಸತೀಶ್ ಭಟ್‌ರವರು ಪ್ರಸ್ತುತ ಜಗತ್ತಿನಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಹಾಗೂ ಪೋಸ್ಕೊ ಕಾಯ್ದೆಯ ಕುರಿತಾದ ಮಾಹಿತಿಯ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ಡಾ.ಅಪರ್ಣರವರು ವಿದ್ಯಾರ್ಥಿಗಳು ಎದುರಿಸುವ ಹದಿಹರೆಯದ ಸವಾಲುಗಳ ಕುರಿತಾಗಿ ಮಾಹಿತಿ ನೀಡಿದರು. ಹಿರಿಯ ಶಿಕ್ಷಕಿ ಪುಷ್ಪಾವತಿಯವರು ಅತಿಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here