ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ

0

ಶೈಕ್ಷಣಿಕ ಸಾಧನೆಯೊಂದಿಗೆ ಕಲೆಯ ಅಭಿರುಚಿ ಬೆಳೆಯಲಿ : ಎಂ.ಎನ್.ಚಂಬಲ್ತಿಮಾರ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಗುರುವಾರ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಕಣಿಪುರ ಯಕ್ಷಗಾನ ಮಾಸ ಪತ್ರಿಕೆಯ ಪ್ರಧಾನ ಸಂಪಾದಕ ಎಂ.ಎನ್.ಚಂಬಲ್ತಿಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಜೊತೆಗೆ ಕಲಾ ಅಭಿರುಚಿ ಬೆಳೆಸಿಕೊಂಡು, ಮಾನವೀಯ ಗುಣಗಳನ್ನ ರೂಢಿಸಿಕೊಂಡು ಸಜ್ಜನರಾಗಿ ಬೆಳೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳು ಭಾರತೀಯತೆಯನ್ನು ಜಗತ್ತಿಗೆ ಸಾರಬೇಕು ಎಂದು ಕರೆನೀಡಿದರು. ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಅಂಬಿಕಾ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಯಶಸ್ ಪ್ರಾರ್ಥಿಸಿ, ಅನರ್ಘಶ್ರೀ ಸ್ವಾಗತಿಸಿ, ಸೋನಾಪೃಥ್ವಿ ವಂದಿಸಿದರು. ಕುವೀರಾ ಕಾರ್ಯಕ್ರಮದ ನಿರೂಪಣೆಗೈದರು.

LEAVE A REPLY

Please enter your comment!
Please enter your name here