ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಜರುಗಿದ ರಾಜ್ಯ ಮಟ್ಟದ ಜೂನಿಯರ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ನಲ್ಲಿ +87 ವಿಭಾಗದಲ್ಲಿ ಭಾಗವಹಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ರಕ್ಷಾ.ಜಿ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ಗೆ ಆಯ್ಕೆ ಆಗಿದ್ದಾರೆ.
ಇವರು ಜೂನ್ ತಿಂಗಳ 18 ರಿಂದ 21 ರ ವರೆಗೆ ಮಧ್ಯಪ್ರದೇಶದ ಇಂಧೊರ್ನಲ್ಲಿ ನಡೆಯಲಿರುವ ’ಅಸ್ಮಿತಾ ಖೇಲೊ ಇಂಡಿಯಾ’ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಹಾಗೂ ಯತೀಶ್ ಇವರ ಮಾರ್ಗದರ್ಶನದಲ್ಲಿ ಡಾ. ಜ್ಯೋತಿ ತರಬೇತಿ ನೀಡಿರುತ್ತಾರೆ. ಇವರು ಬಂಟ್ವಾಳದ ಬರಿಮಾರಿನ ಡೀಕಯ್ಯ ಪೂಜಾರಿ ಹಾಗೂ ಎಸ್ ಲಲಿತಾ ದಂಪತಿ ಪುತ್ರಿಯಾದ ಇವರು ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.