ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ – ರಸ್ತೆ ತಡೆ

0

ಪುತ್ತೂರು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪುತ್ತೂರು ಬಿಜೆಪಿಯಿಂದ ಜೂ.20ರಂದು ಪುತ್ತೂರು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮೆರವಣಿಗೆಯ ನಡುವೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿಯ ಗಾಂಧಿಕಟ್ಟೆ ಬಳಿ ರಸ್ತೆ ತಡೆ ನಡೆಯಿತು. ಪೊಲೀಸರು ಬಂದು ಕಾರ್ಯಕರ್ತರನ್ನು ರಸ್ತೆ ತಡೆ ಮಾಡದಂತೆ ಮನವಿ ಮಾಡಿ ರಸ್ತೆಯಲ್ಲಿ ಕುಳಿತ ಕಾರ್ಯಕರ್ತರನ್ನು ಎಬ್ಬಿಸುವ ಪ್ರಯತ್ನ ಮಾಡಿದರು. ಕೊನೆಗೆ ಪ್ರತಿಭಟನಾಕಾರರು ಕೋರ್ಟ್ ರಸ್ತೆಯ ಮೂಲಕ ತಾಲೂಕು ಆಡಳಿತ ಸೌಧದ ಮುಂದೆ ತಹಸೀಲ್ದಾರ್ ಕಚೇರಿ‌ ಮೂಲಕ ಸರಕಾರಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆಯ ಮನವಿ ಸಲ್ಲಿಸಿದರು.

ಕೊನೆಯ ತನಕ ಕಾರ್ಯಕರ್ತರೊಬ್ಬರು ಬೈಸಿಕಲ್ ಮೂಲಕ ಸವಾರಿ ಮಾಡಿ ಪ್ರತಿಭಟನೆ ಪ್ರದರ್ಶನ ತೋರ್ಪಡಿಸಿದರು.
ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಮುಖ್ಯ ರಸ್ತೆಯಲ್ಲಿ‌ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿದ ಸಂದರ್ಭ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಅವರು ಮಾತನಾಡಿದರು. ತಾಲೂಕು ಆಡಳಿತ ಸೌಧದ ಎದುರು ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಮನವಿ ಪತ್ರವನ್ನು ‌ಮಂಡಿಸಿದರು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಮಂದಿ ಪ್ರಮುಖರು‌ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.

LEAVE A REPLY

Please enter your comment!
Please enter your name here