![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು : ಕೊಪ್ಪ ಸ.ಕಿ.ಪ್ರಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ 21ರಂದು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕ ನಾರಾಯಣ ಡಿ. ಪುಣಚರವರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸರಳ ಯೋಗಾಸನವನ್ನು ಅತಿಥಿ ಶಿಕ್ಷಕ ಸುರೇಶ ನಾಯ್ಕ ಹಾಗೂ ಗೌರವ ಶಿಕ್ಷಕಿ ಹವ್ಯ ಇವರು ನಡೆಸಿಕೊಟ್ಟರು.