![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಪತ್ತು ನಿರ್ವಹಣಾ ಘಟಕ ಮಾಣಿ ವಲಯ ಹಾಗೂ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಹಯೋಗದೊಂದಿಗೆ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ ನಡೆಸಲಾಯಿತು.
![](https://puttur.suddinews.com/wp-content/uploads/2024/06/Untitled-3-13.jpg)
![](https://puttur.suddinews.com/wp-content/uploads/2024/06/Untitled-4-13.jpg)
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷರೂ, ಮಾಣಿ ಜನಜಾಗೃತಿ ವಲಯಾಧ್ಯಕ್ಷರಾಗಿರುವ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಸುರೇಶ್ ಕೆ.ಎಸ್. ಮುಕ್ಕುಡ ರವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 80 ಗಿಡಗಳನ್ನು ನಾಟಿ ಮಾಡಲಾಯಿತು.ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ , ಸೇವಾ ಪ್ರತಿನಿಧಿ ಸುಗಂಧಿನಿ, ಘಟಕದ ಸಂಯೋಜಕ ಗಣೇಶ್ , ಪ್ರತಿನಿಧಿ ಸತೀಶ್ ಮೊದಲಾದವರು ಉಪಸ್ಥಿತರಿದ್ದರು.