![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯನಿ ದೀಪಿಕಾ ಚಾಕೋಟೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಎಲ್ಲರನ್ನು ಸ್ವಾಗತಿಸಿ ಯೋಗದ ಮಹತ್ವವನ್ನು ತಿಳಿಸಿದರು. ಯೋಗ ತರಬೇತಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ನೆಟ್ಟಾರ್, ಗಣಿತ ಶಿಕ್ಷಕ ಪ್ರದೀಪ್ ಎ.ಆರ್, ಶೈಕ್ಷಣಿಕ ಸಲಹೆಗಾರ ಕೃಷ್ಣ ಪ್ರಸಾದ್ ರವರು ನೀಡಿದರು.. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ ಉಪಸ್ಥಿತರಿದ್ದರು…ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
![](https://puttur.suddinews.com/wp-content/uploads/2024/06/Untitled-25-3.jpg)