





ಅರಿಯಡ್ಕ: ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ವಿಶ್ವಯೋಗ ದಿನಾಚರಣೆ ಅಂಗವಾಗಿ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿಯವರ ನೇತೃತ್ವದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಮೀನಾಕ್ಷಿ ಪಾಪೆಮಜಲು ಮತ್ತು ಪಂಚಾಯತ್ ಪಿ.ಡಿ.ಓ ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಯೋಗ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಿದರು. ಪಂಚಾಯತ್ ಸದಸ್ಯ ಹರೀಶ್ ರೈ ಜಾರತ್ತಾರು ಯೋಗ ಶಿಕ್ಷಣ ನೀಡಿದರು.








