ಮಾಡನ್ನೂರು ಸ.ಹಿ.ಪ್ರಾ ಶಾಲೆಯಲ್ಲಿ ಯೋಗ ದಿನಾಚರಣೆ

0

ಬಡಗನ್ನೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಡನ್ನೂರು ಇಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ 21 ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ಆಶಾ ಕಾರ್ಯಕರ್ತೆ  ಹರಿಣಾಕ್ಷಿ,ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಕೊಟ್ಟರು. ಬಳಿಕ ವಿದ್ಯಾರ್ಥಿಗಳು ವಿವಿಧ ಆಸನಗಳು, ಪ್ರಾಣಾಯಾಮ ಮಾಡುವುದರ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ , ಜುಬೈರ್ ಕೆ  ಮುಖ್ಯ ಗುರುಗಳು ಸಂತೋಷ್ ಮಿಸ್ಕಿತ್ ಹಾಗೂ ಶಿಕ್ಷಕ ವೃಂದದವರು ಮತ್ತು ಮಕ್ಕಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here